赛派号

轻卡发动机什么牌子的好 ಇದು ನನ್ನ ಕೊನೆಯ ನಿರೂಪಣೆ, ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು: ಸುದೀಪ್‌ ಭಾವುಕ ಪೋಸ್ಟ್‌

ಬೆಂಗಳೂರು: ಬಿಗ್ ಬಾಸ್ (Bigg Boss) ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು ಎಂದು ಕಿಚ್ಚ ಸುದೀಪ್‌ (Sudeep) ಹೇಳಿದ್ದಾರೆ.

ಮುಂದಿನ ಭಾನುವಾರ ಬಿಗ್‌ಬಾಸ್‌ 11 (BBK11) ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್‌ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಸುದೀಪ್‌ ಹೇಳಿದ್ದೇನು? ಕಳೆದ 11 ಸೀಸನ್‌ಗಳಿಂದ ನಾನು ಬಿಗ್‌ಬಾಸ್‌ ಅನ್ನು ತುಂಬಾ ಇಷ್ಟಪಟ್ಟಿದ್ದೇನೆ. ನೀವು ತೋರಿಸಿದ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫೈನಲ್ ನನ್ನ ಕೊನೆಯ ನಿರೂಪಣೆ. ನಿಮ್ಮನ್ನು ಮನರಂಜಿಸಲು ನಾನು ಪ್ರಯತ್ನಿಸುತ್ತೇನೆ.

ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು. ಇದನ್ನು ಉತ್ತಮ ರೀತಿಯಲ್ಲಿ ನಿಭಾಯಿಸಿದ್ದೇನೆ ಎಂಬ ಸಂತೋಷ ನನಗಿದೆ. ಈ ಅವಕಾಶ ಕೊಟ್ಟ ಕಲರ್ಸ್ ಕನ್ನಡ ವಾಹಿನಿಗೆ ಧನ್ಯವಾದಗಳು. ನಿಮ್ಮೆಲ್ಲರ ಮೇಲೂ ಅಪಾರವಾದ ಪ್ರೀತಿ ಮತ್ತು ಗೌರವವಿದೆ ಎಂದು ಕಿಚ್ಚ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಜತ್ ಕುಟುಂಬಕ್ಕೆ ಟ್ರೋಲ್ ಟೆನ್ಷನ್ – ಮಾಜಿ ಗೆಳತಿ ಜೊತೆಗಿನ ಫೋಟೋ ವೈರಲ್

BB is smthn I he enjoyed from past 11 seasons. Thank u all for all the love you he shown. Coming finale is my last as a host, and I hope to entertain u all to my best. It’s an unforgettable journey, I’m glad to he handled it to my best. Thank you, @ColorsKannada, for this…

— Kichcha Sudeepa (@KicchaSudeep) January 19, 2025

ಈ ಶೋ ನಡೆಯುವ ಮೊದಲು ದೊಡ್ಮನೆ ಆಟ ಸೀಸನ್ 11 ನಡೆಸಿಕೊಡುವುದಿಲ್ಲ ಎಂದು ನೇರವಾಗಿ ತಿಳಿಸಿದ್ದರು. ಆದರೆ ವಾಹಿನಿ ಮತ್ತು ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಶೋ ನಡೆಸಲು ಒಪ್ಪಿಗೆ ನೀಡಿದ್ದರು.

ಮ್ಯಾಕ್ಸ್‌ ಸಿನಿಮಾದ ಸಂದರ್ಶನದಲ್ಲಿ ಮಾತನಾಡಿದ ಸುದೀಪ್‌, ಎಷ್ಟು ಮಾಡುವುದು? ಎಲ್ಲರನ್ನೂ ರಿಪೇರಿ ಮಾಡುತ್ತಾ ಕುಳಿತುಕೊಳ್ಳಲು ನಾನು ಬಂದಿದ್ದೀನಾ? ಬೇರೆ ಕೆಲಸಗಳು ಇರುತ್ತವೆ. ತುಂಬ ಶ್ರಮ ಬೇಕು. ಅದು ಯಾರಿಗೂ ಅರ್ಥ ಆಗುತ್ತಿಲ್ಲ ಎಂದಿದ್ದರು.

sudeep 3

ಕಳೆದ ಬಿಗ್‌ ಬಾಸ್ ಸೀಸನ್​ ನಡೆಯುವಾಗ ನನ್ನ ಸಿನಿಮಾದ ಶೂಟಿಂಗ್​‌ ತಮಿಳುನಾಡಿನ ಮಹಾಬಲಿಪುರಂನಲ್ಲಿ ನಡೆಯುತ್ತಿತ್ತು. ಚೆನ್ನೈನಿಂದ ಅಲ್ಲಿಗೆ ಹೋಗಲು ಒಂದೂವರೆ ಗಂಟೆ ಬೇಕು. ಬೆಂಗಳೂರಿನಿಂದ ನಾನು ಅಲ್ಲಿಗೆ ಹೋಗಿ, ಅಲ್ಲಿ ಶೂಟಿಂಗ್ ಮಾಡಿ, ಮಧ್ಯರಾತ್ರಿ ಶೂಟಿಂಗ್ ಮುಗಿಸಿ, ಖಾಸಗಿ ವಿಮಾನದಲ್ಲಿ ವಾಪಸ್ ಬೆಂಗಳೂರಿಗೆ ಬಂದು ಬಿಗ್ ಬಾಸ್ ಎಪಿಸೋಡ್​ ನೋಡಿ, ವೀಕೆಂಡ್​ ಸಂಚಿಕೆ ಶೂಟ್ ಮಾಡಬೇಕು. ಇದರಿಂದ ನನಗೆ ತುಂಬ ಸುಸ್ತಾಗುತ್ತಿತ್ತು ಎಂದು ತಿಳಿಸಿದ್ದರು.

ನಾನು ಬೆಂಗಳೂರಿನಲ್ಲಿ ಇದ್ದರೆ ಯಾವುದೇ ಸಮಸ್ಯೆ ಇಲ್ಲ. ಬೇರೆ ಕಡೆ ಸಿನಿಮಾ ಶೂಟಿಂಗ್‌ ಇದ್ದಾಗ ಈ ಶೋ ಮಾಡಲು ಕಷ್ಟ ಆಗುತ್ತದೆ. ನಾನು ಎಲ್ಲಿಯೇ ಇದ್ದರೂ ಗುರುವಾರ ಶೂಟಿಂಗ್ ಮುಗಿಸಿಕೊಂಡು ಶುಕ್ರವಾರ ಓಡಿಬರಬೇಕು. ಸಿನಿಮಾದಲ್ಲಿ ಸಾವಿರ ಜನರು ಶೂಟಿಂಗ್ ಮಾಡುತ್ತಿರುತ್ತಾರೆ. ಆದರೆ ಬಿಗ್ ಬಾಸ್​ ಸಲುವಾಗಿ ಶುಕ್ರವಾರ, ಶನಿವಾರ ಬ್ರೇಕ್ ಆಗುತ್ತದೆ. ಸಿನಿಮಾಗಳು ಇಲ್ಲದಿದ್ದಾಗ ಇದು ಓಕೆ. ಸಿನಿಮಾ ಶೂಟಿಂಗ್​ ಇದ್ದರೆ ತಡ ಆಗುತ್ತದೆ. ಇಷ್ಟು ವರ್ಷ ಖುಷಿಯಿಂದಲೇ ಮಾಡಿದ್ದೇನೆ. ಈಗ ಬೇರೆ ಯಾರಾದರೂ ಮಾಡಲಿ ಎಂದು ಹೇಳಿದ್ದರು.

 

版权声明:本文内容由互联网用户自发贡献,该文观点仅代表作者本人。本站仅提供信息存储空间服务,不拥有所有权,不承担相关法律责任。如发现本站有涉嫌抄袭侵权/违法违规的内容, 请发送邮件至lsinopec@gmail.com举报,一经查实,本站将立刻删除。

上一篇 没有了

下一篇没有了